ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಅಡ್ಕಾರು ಎಂಬಲ್ಲಿ ಗುರುವಾರ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರಾಗಿದ್ದಾರೆ.
ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.