ಸುಳ್ಯ: ಶರ್ಬತ್ ಸೇವಿಸಿದ ಮಹಿಳೆ ಮೃತ್ಯು

Prasthutha|

ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ.
ಲೀಲಾವತಿ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.

- Advertisement -


ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು , ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು.


ಇದರ ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಅವರಲ್ಲಿ ಲೀಲಾವತಿಯವರಿಗೆ ವಾಂತಿ, ಭೇದಿ ಆರ೦ಭವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಸೌಖ್ಯ ತೀವ್ರಗೊ೦ಡು ಅ. 2ರ೦ದು ಹೆಚ್ಚಿನ ಚಿಕಿತ್ಸೆಗಾಗಿ ಮ೦ಗಳೂರಿಗೆ ಕೊ೦ಡೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.