ಸುಳ್ಯ: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅರಂತೋಡಿನಲ್ಲಿ ಅದಿತ್ಯವಾರ ನಡೆದಿದೆ.
ಅರಂತೋಡಿನ ಕೇಶವ (32) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.
ಕೇಶವ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಆದರೆ ಕೊರೋನಾ ಬಳಿಕ ಅರಂತೋಡಿನ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.