ಸುಳ್ಯ: ತಲೆಗೆ ಗುಂಡು ಹೊಡೆದು ಯುವಕ ಸಾವು

Prasthutha|

ಮಂಗಳೂರು: ಕೋವಿಯಿಂದ ತಲೆಗೆ ಗುಂಡು ಹೊಡೆದುಕೊಂಡು ಯುವಕನೊರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಎಂಬಲ್ಲಿ ನಡೆದಿದೆ.

- Advertisement -


ಅರಂತೋಡು ನಿವಾಸಿ ರವಿ (32) ಮೃತ ಯುವಕ.


ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆ ಬಂದಿದ್ದ ಯುವಕ ಮಂಗಳವಾರ ರಾತ್ರಿ ಮನೆಯಿಂದ ಕೋವಿ ಹಿಡಿದು ಗುಡ್ಡಕ್ಕೆ ಹೋಗಿ ಈ ಕೃತ ಎಸಗಿದ್ದಾರೆ. ಕೆಲಸಮಯದಿಂದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ರಾತ್ರಿಯೇ ಪೊಲೀಸರು ಬಂದು ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.