ಸುಳ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ| ಇಬ್ಬರು ಸಂಘ ಪರಿವಾರದ ಕಾರ್ಯಕರ್ತರ ಬಂಧನ

Prasthutha|

ಸುಳ್ಯ: ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ.

ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದರು.

- Advertisement -

ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ಸಂಘ ಪರಿವಾರದ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಘಟನೆಯಿಂದ ಗಾಯಗೊಂಡ ಹಫೀದ್ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಬ್ರಹ್ಮಣ್ಯ ಠಾಣೆಯಲ್ಲಿ ಹಫೀದ್ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Join Whatsapp