ಸುಳ್ಯ: ದನ ಮೈ ಮೇಲೆ ಬಿದ್ದು ವ್ಯಕ್ತಿ ಮೃತ್ಯು!

Prasthutha|

ಸುಳ್ಯ: ಸಾಕು ದನವನ್ನು ತೋಟದ ಬದಿಯಲ್ಲಿ ಕರೆದೊಯ್ಯುತ್ತಿದ್ದ ವೇಳೆ ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡದ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ.

- Advertisement -

ಸುಳ್ಯ ತಾಲೂಕು ಅಮರಪಡ್ನೂರು ಗ್ರಾಮದ ಚೊಕ್ಕಾಡಿಯ ನಡುಗಲ್ಲು ರಾಧಾಕೃಷ್ಣ ಮೃತ ವ್ಯಕ್ತಿ.

ತಮ್ಮ ಸಾಕು ದನವನ್ನು ಮೇಯಿಸಲು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಇಳಿಜಾರಿನಲ್ಲಿ ರಾಧಾಕೃಷ್ಣ ಅವರು ಕಾಲು ಜಾರಿ ಬಿದ್ದಿದ್ದಾರೆ. ಈ ಸಂದರ್ಭ ದನದ ಹಗ್ಗ ಅವರ ಕೈಯಲ್ಲಿದ್ದುದರಿಂದ ಎಳೆಯಲ್ಪಟ್ಟಿದ್ದಾರೆ. ಆ ವೇಳೆ ದನ ರಾಧಾಕೃಷ್ಣರ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿ ಬಂದ ಮನೆಯವರು ಸ್ಥಳೀಯರ ನೆರವಿನಿಂದ ಅವರನ್ನು ಮೇಲಕ್ಕೆತ್ತಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ರಾಧಾಕೃಷ್ಣ ಸಾವೀಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.



Join Whatsapp