ಸುಳ್ಯ ಜೆಡಿಎಸ್ ನಾಯಕರು ಸಾಮೂಹಿಕ ರಾಜೀನಾಮೆ

Prasthutha|

ಸುಳ್ಯ: ಬಿಜೆಪಿ- ಜೆಡಿಎಸ್ ಮೈತ್ರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. 40 ವರುಷಗಳಿಂದ ಜನತಾದಳ ಪಕ್ಷದಲ್ಲಿ ಜಾತ್ಯತೀತ ಸಿದ್ಧಾಂತ ಸಾಮಾಜಿಕ ನ್ಯಾಯದ ನಿಲುವಿಗೆ ಬದ್ಧರಾಗಿ ಪಕ್ಷದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿದ್ದ ಹಲವು ಜೆಡಿಎಸ್ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿದ ಜೆಡಿಎಸ್ ಮುಖಂಡರು, ಎನ್ ಡಿ ಎ ಒಕ್ಕೂಟದೊಂದಿಗೆ ಚುನಾವಣಾ ಮೈತ್ರಿ ಯನ್ನು ಮಾಡಿಕೊಂಡಿರುವುದನ್ನು ಒಪ್ಪಿಕೊಳ್ಳಲು ಅಸಾಧ್ಯವಾಗಿರುವುದರಿಂದ ಜನತಾದಳ ಜಾತ್ಯತೀತ ಪಕ್ಷದಲ್ಲಿ ತೊಡಗಿಸಿ ಕೊಳ್ಳಲು ನಮಗೆ ಅಸಾಧ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸಮಾನಮನಸ್ಕರಾದ ನಾವೆಲ್ಲರೂ ಒಟ್ಟಾಗಿ ಜನತಾದಳ ಪಕ್ಷದ ಪ್ರಾಥಮಿಕ ಸದಸ್ಯತಕ್ಕೆ ಈ ದಿನ ರಾಜೀನಾಮೆ ಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ,ರಾಜ್ಯಧ್ಯಕ್ಷರಿಗೆ ಸಲ್ಲಿಸಿರುತ್ತೇವೆ ಎಂದಿದ್ದಾರೆ.

ಈಗಾಗಲೇ ನಮ್ಮನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಜ್ಯಧ್ಯಕ್ಷರು ಕಾಂಗ್ರೆಸ್ ಪಕ್ಷಕ್ಕೆ, ಸೇರ್ಪಡೆಗೊಳ್ಳುವ ಆಹ್ವಾನವನ್ನು ನೀಡಿದ್ದಾರೆ, ಇಲ್ಲಿನ ಕಾಂಗ್ರೆಸ್ ಮುಖಂಡರೊಂದಿಗೆ ಮಾತುಕತೆ ನಡೆಸಿ ಸಾಮೂಹಿಕವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುವ ಬಗ್ಗೆ ನಿರ್ಧಾರಕ್ಕೆ ಬಂದಿದ್ದೇವೆ ಎಂದಿದ್ದಾರೆ.

Join Whatsapp