ಸುಳ್ಯ: ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತ್ಯು

Prasthutha|

ಸುಳ್ಯ: ಇಲ್ಲಿನ ಕೇನ್ಯ ಬಳಿಯ ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

- Advertisement -

ಮೃತಪಟ್ಟ ಸಹೋದರಿಯರನ್ನು ಬಳ್ಪ ಸಮೀಪದ ಕೇನ್ಯ ಮೂಲದ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ, ಕುಟುಂಬ ಸಮೇತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಊರಿನಲ್ಲಿ ನಡೆಯುವ ಕಾರ್ಯಕ್ರಮ ನಿಮಿತ್ತ ನಿನ್ನೆಯಷ್ಟೇ(ಸೋಮವಾರ) ಊರಿಗೆ ಬಂದಿದ್ದು, ಸಂಜೆ ವೇಳೆ ಹೊಳೆಗೆ ತೆರಳಿದ್ದ ಮಕ್ಕಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ತೀವ್ರ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆ ಮೃತದೇಹಗಳನ್ನು ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹೋದರಿಯರಿಬ್ಬರ ನಿಧನದಿಂದ ಕುಟುಂಬದ ರೋಧನೆ ಮುಗಿಲು ಮುಟ್ಟಿದ್ದು, ಇಡೀ ಗ್ರಾಮವೇ ಮಮ್ಮಲ ಮರುಗಿದೆ.