ಸುಳ್ಯ: ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಸದಸ್ಯ ವಿದ್ಯಾರ್ಥಿಯೋರ್ವನಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ ಘಟನೆ ತಾಲ್ಲೂಕು ಗೂನಡ್ಕದಲ್ಲಿ 29 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹಲ್ಲೆ ಮಾಡಿದವನನ್ನು ಕಿಶೋರ್ ಎಂದು ಗುರುತಿಸಲಾಗಿದ್ದು. ಹಲ್ಲೆಗೊಳಗಾದ ವಿದ್ಯಾರ್ಥಿ ಮೂರನೆಯ ತರಗತಿಯ ಬಾಲಕನಾಗಿದ್ದಾನೆ. ಘಟನೆಯಿಂದ ಬಾಲಕನ ಬೆನ್ನು ಮತ್ತು ಕಾಲಿನ ಭಾಗದಲ್ಲಿ ಗಾಯಗಳು ಕಂಡುಬಂದಿವೆ.
ಅಲ್ಲದೆ, ಈ ವಿಷಯವನ್ನು ಮನೆಯಲ್ಲಿ ತಿಳಿಸಿದರೆ ನಾಳೆ ಮತ್ತೊಮ್ಮೆ ಹೊಡೆಯುತ್ತೇನೆ ಎಂಬ ಬೆದರಿಕೆಯನ್ನು ಹಾಕಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ. ಹಲ್ಲೆ ನಡೆಸಿದ ಸದಸ್ಯನ ವಿರುದ್ಧ ಸಾಮಾಜಿಕ ಜಾಲತಾಣದಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.