Home ಕರಾವಳಿ ಸುಳ್ಯ: ಹಳೆಯ ಕಟ್ಟಡದ ಗೋಡೆ ಮೈ ಮೇಲೆ ಬಿದ್ದು ವ್ಯಾಪಾರಿ ಮೃತ್ಯು

ಸುಳ್ಯ: ಹಳೆಯ ಕಟ್ಟಡದ ಗೋಡೆ ಮೈ ಮೇಲೆ ಬಿದ್ದು ವ್ಯಾಪಾರಿ ಮೃತ್ಯು

ಸುಳ್ಯ : ಸ್ಥಗಿತಗೊಂಡಿದ್ದ ಕ್ಯಾಶ್ಯೂ ಫ್ಯಾಕ್ಟರಿಯ ಕಟ್ಟಡವನ್ನು ತೆರವುಗೊಳಿಸುತ್ತಿದ್ದಾಗ ಗೋಡೆ ಕುಸಿದು ವ್ಯಾಪಾರಿಯೊಬ್ಬರು ಮೃತಪಟ್ಟಿರುವ ಘಟನೆ ಸುಳ್ಯದ ಗಾಂಧಿನಗರದಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ಗುಜರಿ ವ್ಯಾಪಾರಿ ಅಬ್ದುಲ್ ಖಾದರ್ (45)ರವರು ಎಂದು ಗುರುತಿಸಲಾಗಿದೆ.


ಮೃತರು ಹಲವು ವರ್ಷಗಳಿಂದ ಸುಳ್ಯದಲ್ಲಿ ಹಳೆ ಕಟ್ಟಡದ ಕಬ್ಬಿಣ ಸಾಮಾಗ್ರಿಗಳನ್ನು ತೆಗೆಯುವ ವ್ಯಾಪಾರ ನಡೆಸುತ್ತಿದ್ದರು. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿ ಕಳೆದ ವರ್ಷಗಳಿಂದ ವ್ಯವಹಾರ ಸ್ಥಗಿತಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಖಾದರ್ ಹಳೆಯ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದರು. ತಮ್ಮ ಕೆಲಸದಾಳುಗಳ ಜೊತೆ ಖಾದರ್ ಇಂದು ಬೆಳಗ್ಗೆ ಗೋಡೆಯ ಮೇಲ್ಭಾಗದಲ್ಲಿದ್ದ ಕಬ್ಬಿಣದ ಟ್ರಸ್ ಅನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಗೋಡೆಯು ಅಬ್ದುಲ್ ಖಾದರ್ರ ಮೈ ಮೇಲೆ ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.


ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.
ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

Join Whatsapp
Exit mobile version