ಚಾಮರಾಜನಗರ: ಗೃಹ ಸಚಿವ ಅಮಿತ್ ಶಾ ಅವರಿಗೆ ಸ್ವಾಗತ ಕೋರಿ ಹಾಕಲಾದ ಫ್ಲೆಕ್ಸ್ ನಲ್ಲಿ ಸಂಸದೆ ಸುಮಲತಾ ಅಂಬರೀಶ್ ಫೋಟೋ ವಿಚಾರ ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುಮಲತಾ ಬಿಜೆಪಿ ಸೇರುವುದು ಅವರ ವೈಯಕ್ತಿಕ ವಿಚಾರ. ಸೇರ್ಪಡೆ ವಿಷಯವಾಗಿ ನಮ್ಮೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ. ಮಂಡ್ಯದಲ್ಲಿ ಬಿಜೆಪಿಯ ಬ್ಯಾನರ್’ಗಳಲ್ಲಿ ಸುಮಲತಾ ಫೋಟೊವನ್ನುಅವರ ಹಿತೈಷಿಗಳು ಹಾಕಿರಬಹುದು ಎಂದು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಮಂಡ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ಚುನಾವಣೆಯ ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ನಾವು ಗೆಲ್ಲಬೇಕು. ಅದಕ್ಕೆ ಪೂರಕವಾದ ತಂತ್ರಗಾರಿಕೆಯನ್ನು ಮಂಡ್ಯದಿಂದ ಆರಂಭಿಸುತ್ತಿದ್ದೇವೆ ಎಂದರು.