Home ಟಾಪ್ ಸುದ್ದಿಗಳು ಸುಮಲತಾ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಸೇರ್ಪಡೆಗೊಂಡಿಲ್ಲ: ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್

ಸುಮಲತಾ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಸೇರ್ಪಡೆಗೊಂಡಿಲ್ಲ: ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಮಗೆ ಬೆಂಬಲವನ್ನಷ್ಟೇ ನೀಡಿದ್ದಾರೆ. ಇನ್ನೂ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.


ಮಂಡ್ಯದಲ್ಲಿ ಬಿಜೆಪಿಯಿಂದ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.


ಸುಮಲತಾ ಅಂಬರೀಶ್ ನಮಗೆ ಬರೀ ಬೆಂಬಲ ಅಷ್ಟೇ ಕೊಟ್ಟಿದ್ದಾರೆ. ಆದರೆ ಅವರು ಇನ್ನೂ ಪಕ್ಷಕ್ಕೆ ಸೇರಿಲ್ಲ, ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕಿರುವವರು ಆರು ತಿಂಗಳ ಮುಂಚೆ ಸೇರಬೇಕಿತ್ತು. ಹೀಗಾಗಿ ಅವರ ಬಗ್ಗೆ ವರಿಷ್ಠರು ತೀರ್ಮಾನ ಮಾಡ್ತಾರೆ. ಮಂಡ್ಯದಲ್ಲಿ ನಮಗೆ ಮತಗಳಿಕೆ ಜಾಸ್ತಿಯಾಗಿದೆ, ನಮ್ಮ ಹಾಗೂ ಜೆಡಿಎಸ್ ಇಬ್ಬರ ಶಕ್ತಿ ಸೇರಿದರೆ ಜಾಸ್ತಿ ಆಗಿದೆ. ಹೀಗಾಗಿ ಈ ಬಾರಿ ಮಂಡ್ಯದಲ್ಲಿ ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Join Whatsapp
Exit mobile version