ಸುಮಲತಾ ನನ್ನ ಸ್ವಂತ ಅಕ್ಕ ಇದ್ದಂತೆ: ಕುಮಾರ ಸ್ವಾಮಿ

Prasthutha|

ಮಂಡ್ಯ: ಸಂಸದೆ ಸುಮಲತಾ ಅವರು ನನ್ನ ಸ್ವಂತ ಅಕ್ಕ ಇದ್ದಂತೆ. ಅವರ ಮೇಲೆ ವೈಯಕ್ತಿಕ ದ್ವೇಷವಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ರಾಜಕಾರಣದಲ್ಲಿ ಟೀಕೆ, ವಿರೋಧಗಳು ಸಾಮಾನ್ಯ. ಆದರೆ ವೈಯಕ್ತಿಕವಾಗಿ ನಮಗೆ ಯಾವುದೇ ದ್ವೇಷವಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್‌ಕುಮಾರ್‌ ಅವರು ಸತ್ತಾಗಲೂ ಕಂಠೀರವ ಸ್ಟುಡಿಯೋದಲ್ಲಿಯೇ ಜಾಗ ಕೊಟ್ಟಿದ್ದೆವು. ಅಂಬರೀಷ್‌ ಅವರಿಗೂ ಜಾಗ ನೀಡುವ ಮೂಲಕ ಸ್ಮಾರಕ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದರು.

ಮಂಡ್ಯದಲ್ಲಿ ತಮ್ಮ ಮಗ ನಿಖಿಲ್ ಸ್ಪರ್ಧಿಸಲಿರುವುದನ್ನು ಹೆಚ್‌ಡಿಕೆ ಪರೋಕ್ಷವಾಗಿ ತಿಳಿಸಿದ್ದಾರೆ.

- Advertisement -

ಜೆಡಿಎಸ್ ನಾಯರು, ಮುಖಂಡರ ಜೊತೆ ಸಭೆ ಮಾಡಿದ ಅವರು, ಸಭೆಯಲ್ಲಿ ಎಲ್ಲ ನಾಯಕರು ನಿಖಿಲ್ ಅವರೇ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೆ, ನಿಮಗಾಗಿ ನಿಖಿಲ್​ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ಅವನನ್ನು ಒಪ್ಪಿಸುವ ಕೆಲಸ ಮಾಡುವೆ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ ಎಂದಿದ್ದಾರೆ.



Join Whatsapp