ಟಿಕೆಟ್ ಗೊಂದಲದ ನಡುವೆಯೇ ಚುನಾವಣೆಗೆ ಸಿದ್ಧತೆ ಆರಂಭಿಸಿದ ಸುಮಲತಾ

Prasthutha|

ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಕುತೂಹಲ ಮೂಡಿಸಿದೆ. ಬಿಜೆಪಿಗೆ ಬೆಂಬಲ ನೀಡಿರುವ ಸಂಸದೆ ಸುಮಲತಾ ಇಲ್ಲಿಂದ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದರೆ, ಜೆಡಿಎಸ್ ನಾಯಕರು ಮಂಡ್ಯದಿಂದ ಸ್ಪರ್ಧಿಸಲು ಪೈಪೋಟಿ ನಡೆಸುತ್ತಿದೆ.ಎಲ್ಲಾ ಗೊಂದಲದ ನಡುವೆ ಸಂಸದೆ ಸುಮಲತಾ ತಾನು ಚುನಾವಣೆಗೆ ಸಿದ್ಧತೆ ಆರಂಭಿಸಿದ್ದೇನೆ ಎಂದಿದ್ದಾರೆ.

- Advertisement -

ಶೀಘ್ರದಲ್ಲೇ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಪ್ರವಾಸ ಹಮ್ಮಿಕೊಳ್ಳುವುದಾಗಿ ಹೇಳಿದ ಸುಮಲತಾ, ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ವಿಚಾರವಾಗಿ ನನ್ನ ನಿರ್ಧಾರವನ್ನು ಸ್ಪಷ್ಟವಾಗಿ ಹೇಳಿದ್ದೇನೆ. ನನ್ನ ಸ್ಪರ್ಧೆ ಕುರಿತು ಪಕ್ಷ ತೀರ್ಮಾನ ಮಾಡಬೇಕು. ನನ್ನ ಬೆಂಬಲಿಗರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಪ್ರತಿ ತಾಲೂಕಿಗೆ ತೆರಳಿ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡುತ್ತೇನೆ. ಚುನಾವಣೆ ಸಂಬಂಧವೇ ಈ ಸಭೆ ಮಾಡುತ್ತಿದ್ದೇನೆ. ಇದರ ಬಗ್ಗೆ ಈಗಾಗಲೇ ರೂಪುರೇಷೆಗಳು ನಡೆಯುತ್ತಿವೆ. ನನ್ನ ಬೆಂಬಲಿಗರಿಗೆ ಯಾವುದೇ ಗೊಂದಲವಾಗಬಾರದು ಎಂದಿದ್ದಾರೆ.

- Advertisement -

ಅವರಲ್ಲಿ ವಿಶ್ವಾಸ ತುಂಬುವ ಸಲುವಾಗಿ ಸಭೆ ಮಾಡುತ್ತಿದ್ದೇನೆ ಎಂದರು.ಪಕ್ಷದ ಸೂಚನೆಯಂತೆ ಕೆಲಸಹಿಂದೆ ಸ್ವತಂತ್ರ ಅಭ್ಯರ್ಥಿಯಾಗಿದ್ದೆ, ಈಗ ಬೇರೆ ರೀತಿಯಲ್ಲಿ ಭೇಟಿ ಮಾಡುತ್ತೇನೆ. ಎಲ್ಲಾ ತಾಲ್ಲೂಕಿನ ಬೆಂಬಲಿಗರ ಜೊತೆ ಸಭೆ ನಡೆಸಿ ಚರ್ಚಿಸುತ್ತೇನೆ. ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ತಾಲ್ಲೂಕು ಪ್ರವಾಸ ಮಾಡುತ್ತೇನೆ. ಆದಿ ಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದು ಪ್ರಚಾರ ಆರಂಭಿಸುತ್ತೇನೆ ಎಂದಿದ್ದಾರೆ.

Join Whatsapp