Home ಟಾಪ್ ಸುದ್ದಿಗಳು ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ: ರಂಗಮಂದಿರದಲ್ಲಿದ್ದ ಫೋಟೊ ತೆರವುಗೊಳಿಸಿ ಆಕ್ರೋಶ

ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ: ರಂಗಮಂದಿರದಲ್ಲಿದ್ದ ಫೋಟೊ ತೆರವುಗೊಳಿಸಿ ಆಕ್ರೋಶ

ಮಂಡ್ಯ: ಬಿಜೆಪಿಗೆ ನನ್ನ ಬೆಂಬಲ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಘೋಷಣೆ ಮಾಡಿದ ಬೆನ್ನಲ್ಲೇ ರಂಗಮಂದಿರದಲ್ಲಿದ್ದ ಫೋಟೊ ತೆರವುಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬಿದರಕೆರೆ ಗ್ರಾಮದಲ್ಲಿ ನಡೆದಿದೆ.


ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿರುವ ಲಂಕೇಶ್ ರಂಗಮಂದಿರದಲ್ಲಿ ಹಾಕಿದ್ದ ಅವರ ಫೋಟೊವನ್ನು ಗ್ರಾಮಸ್ಥರು ತೆರವು ಮಾಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಜಯಗಳಿಸಿದ್ದರು. ಆದರೆ ಶುಕ್ರವಾರ ಅಧಿಕೃತವಾಗಿ ಬಿಜೆಪಿಗೆ ಬೆಂಬಲ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಬಿದರಕೆರೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version