Home ಟಾಪ್ ಸುದ್ದಿಗಳು ಸುಮಲತಾಗೆ ಬಿಜೆಪಿಯಿಂದ ಎಂಎಲ್ ಸಿ ಟಿಕೆಟ್ ?

ಸುಮಲತಾಗೆ ಬಿಜೆಪಿಯಿಂದ ಎಂಎಲ್ ಸಿ ಟಿಕೆಟ್ ?

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ಜೂನ್ 13 ರಂದು ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಪಾಲಿನ ಮೂರು ಸ್ಥಾನಗಳಿಗೆ ವಿಧಾನಪರಿಷತ್ ನ ಹಾಲಿ ಸದಸ್ಯ ಎನ್.ರವಿಕುಮಾರ್, ಸಂಸದೆ ಸುಮಲತಾ ಮತ್ತು ಪ್ರೊ.ಎಂ.ನಾಗರಾಜ್ ಅವರನ್ನು ಸಂಭಾವ್ಯ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸುವ ಸಾಧ್ಯತೆಗಳಿವೆ.


ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಅವರಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್ ಸಿಕ್ಕಿಲ್ಲ. 2024 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿಯಾದ ಹಿನ್ನೆಲೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಇದೀಗ ಬಿಜೆಪಿ ಹೈಕಮಾಂಡ್ ಸುಮಲತಾಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Join Whatsapp
Exit mobile version