ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೊ ಚಿತ್ರೀಕರಣ ಪ್ರಕರಣ: ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನ

Prasthutha|

ಮಂಗಳೂರು: ಮಹಿಳೆಯೊಬ್ಬರು ಸ್ನಾನ ಮಾಡುವಾಗ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬುಧವಾರ ನಡೆದಿದ್ದು, ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನವಾಗಿದೆ ಎಂದು ತಿಳಿದು ಬಂದಿದೆ.

- Advertisement -


ಈ ಸಂಬಂಧ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ, ಘಟನೆಗೆ ಸಂಬಂಧಿಸಿ ಪ್ರಜ್ವಲ್ ಎಂಬವರು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸುಮಂತ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಸುಮಂತ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮೊಬೈಲ್ ಫೋನ್ ನ್ನು ಎಫ್ಎಸ್ಎಲ್ ತನಿಖೆಗೆ ಕಳುಹಿಸಲಾಗಿದ್ದು, ವರದಿಯ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.



Join Whatsapp