ಜಾರಕಿಹೊಳಿ ಸೆಕ್ಸ್ CD ಹಗರಣ | ‘ಸುಮೋಟೋ ಕೇಸ್’ ದಾಖಲಿಸಿದ ರಾಜ್ಯ ಮಹಿಳಾ ಆಯೋಗ

Prasthutha: March 5, 2021

ಬೆಂಗಳೂರು :  ಜಾರಕಿಹೊಳಿ ಸೆಕ್ಸ್ CD ಸಂಬಂಧಿಸಿ ಕನ್ನಡ ರಕ್ಷಣಾ ವೇದಿಕೆ ಹಾಗೂ ವಕೀಲರು ನೀಡಿದ್ದ ಎರಡು ದೂರುಗಳನ್ನು ಆಧರಿಸಿ, ರಾಜ್ಯ ಮಹಿಳಾ ಆಯೋಗವು ರಮೇಶ್ ಜಾರಕಿಹೊಳಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಇದರಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

“ಕನ್ನಡ ರಕ್ಷಣಾ ವೇದಿಕೆ ಹಾಗೂ ವಕೀಲರೊಬ್ಬರು ಸಂತ್ರಸ್ತೆಯನ್ನು ಕರೆದು ಹೇಳಿಕೆ ಪಡೆಯುವಂತೆ ದೂರು ನೀಡಿದ್ದಾರೆ. ಇದರಿಂದಾಗಿ ಸಂತ್ರಸ್ತೆಯನ್ನು ಕರೆದು ಹೇಳಿಕೆ ಪಡೆಯುತ್ತೇವೆ. ಪೊಲೀಸ್ ತನಿಖೆಯೂ ನಡೆಯಲಿ, ನಾವು ಪೊಲೀಸರಿಗೆ ಸಹಕರಿಸುತ್ತೇವೆ. ಸಂತ್ರಸ್ತೆ ಯಾವುದೇ ಭಯಪಡುವ ಅವಶ್ಯಕತೆ ಇಲ್ಲ. ಅವರ ಪರವಾಗಿ ಮಹಿಳಾ ಆಯೋಗವಿದೆ” ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.

ಹೀಗಾಗಿ ಸಂತ್ರಸ್ತೆಯ ಹೇಳಿಕೆಯನ್ನು ಪಡೆಯಲು ಪೊಲೀಸರ ಜೊತೆಗೆ, ರಾಜ್ಯ ಮಹಿಳಾ ಆಯೋಗ ಕೂಡ ಮುಂದಾಗಿದೆ. ಇದರಿಂದಾಗಿ ಸೆಕ್ಸ್ CD ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!