ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆ ಮಾಡಲು ಮಾಜಿ ಸಚಿವರಿಂದ ಸಚಿವ ಸುನೀಲ್ ಕುಮಾರ್ ಗೆ ಮನವಿ

Prasthutha|

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆ ಮಾಡಲು ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಸಚಿವ ಸುನೀಲ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಲಿಖಿತ ಮನವಿಯನ್ನು ಸಲ್ಲಿಸಿದ ಮಧ್ವರಾಜ್ , ತುಳು ಭಾಷೆಯನ್ನು ಅಧಿಕೃತ ಭಾಷೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧಿತ ಪರಿಶೀಲನೆ ಮತ್ತು ಅಧ್ಯಯನ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವ ಸುನೀಲ್ ಕುಮಾರ್ ಭರವಸೆ ನೀಡಿದ್ದಾರೆ.



Join Whatsapp