Home ಟಾಪ್ ಸುದ್ದಿಗಳು ಮಂಗಳೂರು, ಉಡುಪಿಯ ಖಾಸಗಿ ಬಸ್‌’ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

ಮಂಗಳೂರು, ಉಡುಪಿಯ ಖಾಸಗಿ ಬಸ್‌’ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

ಉಡುಪಿ: ಸರ್ಕಾರಿ ಬಸ್‌ ಗಳೊಂದಿಗೆ ಖಾಸಗಿ ಬಸ್‌ ಗಳಲ್ಲಿಯೂ ( ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅನುಷ್ಠಾನಕ್ಕೆ ಬರುವುದಾಗಿ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿನ ಜನರಿಗೆ ಇರಿಂದ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ.

ಟ್ವೀಟ್‌ನಲ್ಲೇನಿದೆ?
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್‌ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಬರೆದಿದ್ದಾರೆ.

Join Whatsapp
Exit mobile version