ಧಾರ್ಮಿಕ ವಿದ್ವಾಂಸರೂ, ಶೈಕ್ಷಣಿಕ ಕ್ರಾಂತಿಯ ರೂವಾರಿಯೂ, ಸಮಸ್ತದ ಉಪಾಧ್ಯಕ್ಷರಾಗಿದ್ದ ಶೈಖುನಾ ತಾಜು ಶರೀಅಃ ಅಲಿ ಕುಂಞಿ ಉಸ್ತಾದರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಯುತರು ಚಿಕಿತ್ಸೆ ಫಲಕಾರಿಯಾಗದೆ ಅಗಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅಗಣ್ಯ ಸಾಧನೆ ಮಾಡಿ ಶಿಕ್ಷಣಕ್ಕೆ ಒತ್ತು ಕೊಟ್ಟು ಜೀವನಪೂರ್ತಿ ಸಮಾಜದ ಏಳಿಗೆಗಾಗಿ ಶ್ರಮಿಸಿದ್ದರು ಅಲಿ ಕುಂಞಿ ಉಸ್ತಾದ್.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಉಪಾಧ್ಯಕ್ಷರಾಗಿದ್ದ ಅವರು ದ.ಕ ಮತ್ತು ಕಾಸರಗೋಡು ಜಿಲ್ಲೆಯ ಹಲವು ಮೊಹಲ್ಲಾಗಳ ಖಾಝಿಯಾಗಿ ಕಾರ್ಯನಿರ್ವಹಿಸಿದ್ದರು. ಶಿರಿಯಾ ಲತೀಫಿಯ್ಯಾ ಎಜುಕೇಶನಲ್ ಕಾಂಪ್ಲೆಕ್ಸ್ ಇದರ ಅಧ್ಯಕ್ಷರಾಗಿದ್ದ ಅವರು ನಾಡಿನ ಪ್ರಮುಖ ವಿದ್ವಾಂಸರಾಗಿ ಗುರುತಿಸಲ್ಪಟ್ಟಿದ್ದರು.
ಇವರ ಅಗಲಿಕೆ ರಾಜ್ಯದ ವಿವಿಧ ಸಂಘಟನೆಗಳು, ಸಾಮಾಜಿಕ, ಧಾರ್ಮಿಕ, ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದ, ಕುಂಬಳೆ ಸಮೀಪದ ಶಿರಿಯಾ ನಿವಾಸಿಯಾದ ಅವರು ಪತ್ನಿ, ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಗಳ ಮತ್ತು ಸಾವಿರಾರು ಶಿಷ್ಯಂದಿರನ್ನು ಅಗಲಿದ್ದಾರೆ.