ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ ಸಿಪಿಸಿಆರ್) ಸುಮೊಟೋ ಕೇಸ್ ದಾಖಲಿಸಿದೆ.
ಪ್ರಕರಣ ಸಂಬಂಧ ವಿಚಾರಣೆ ಸರಿಯಾದ ರೀತಿಯಲ್ಲಿ ವಿಚಾರಣೆ ನಡೆಸಬೇಕು ಹಾಗೂ ಸಂತ್ರಸ್ತೆಯರ ಗುರುತನ್ನು ಬಹಿರಂಗಪಡಿಸಬಾರದು ಎಂದು ಎನ್ ಸಿಪಿಸಿಆರ್ ಆದೇಶಿಸಿದೆ.
ಅಲ್ಲದೆ ಸಂತ್ರಸ್ತೆಯರಿಗೆ ಯಾವ ರೀತಿ ರಕ್ಷಣೆ ಒದಗಿಸಲಾಗಿದೆ ಎನ್ನುವುದು ಸೇರಿದಂತೆ ಪ್ರತಿಯೊಂದು ಮಾಹಿತಿಯ ವಿವರವಾದ ವರದಿಯನ್ನು 7 ದಿನಗಳೊಳಗೆ ನೀಡುವಂತೆ ಚಿತ್ರದುರ್ಗ ಎಸ್ ಪಿ ಪರಶುರಾಮ್ ಅವರಿಗೆ ಆಯೋಗ ಸೂಚಿಸಿದೆ
ಸಂತ್ರಸ್ತ ವಿದ್ಯಾರ್ಥಿನಿಯರು ನ್ಯಾಯಾಧೀಶರ ಮುಂದೆ ಸಿಆರ್ ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಈಗಾಗಲೇ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಇಂದು ಕೋರ್ಟ್ ನಲ್ಲಿ ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಮುರುಘಾ ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುರುಘಾ ಮಠದ ಎಲ್ಲಾ ಗೇಟ್ ಗಳನ್ನು ಬಂದ್ ಮಾಡಲಾಗಿದೆ. ಮುರುಘಾ ಸ್ವಾಮೀಜಿಯ ಬಂಧನ ಸಾಧ್ಯತೆ ದಟ್ಟವಾಗಿದೆ.