ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಶಿವಮೊಗ್ಗದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆ ಐಪಿಸಿ 155, 505(2) ಕಾಯ್ದೆಯಡಿ ಸುಮೋಟೊ ಕೇಸ್ ದಾಖಲಿಸಲಾಗಿದೆ.
ಹಫೀಝ್ ಮುಹಮ್ಮದ್ ಎಂಬಾತನು ತನ್ನ ಫೇಸ್ಬುಕ್ ಖಾತೆಯಲ್ಲಿ ಪ್ರಿಪ್ರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂಬ ಪೋಸ್ಟ್ ಹಾಕಿದ್ದನು.