ವರ್ಷದ ಹಿಂದೆಯೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತ, ಹಿಂದೂ ವಿರೋಧಿ ಬಿಜೆಪಿ ಸರ್ಕಾರವೋ, ಬೊಮ್ಮಾಯಿಯೋ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Prasthutha|

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

- Advertisement -


ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಂಸದ ನಳಿನ್ ಕುಮಾರ್ ಕಟೀಲ್ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ? ಎಂದು ಪ್ರಶ್ನಿಸಿದ್ದಾರೆ.

ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -


ಬಿಜೆಪಿ ರಾಜ್ಯಾಧ್ಯಕ್ಷ ನಳಿಕ್ ಕುಮಾರ್ ಕಟೀಲ್ ಪೋಸ್ಟ್ನ್ನು ಟ್ಯಾಗ್ ಮಾಡಿ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.


ನಿನ್ನೆ ಈ ಸಂಬಂಧ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯಿಸುತ್ತಾ, ನಮ್ಮಲ್ಲಿ ಸ್ಥಳೀಯರಿಗೇ ತುಪ್ಪ ಸಾಲುತ್ತಿಲ್ಲ. ನಮಗೇ ತುಪ್ಪದ ಕೊರತೆ ಇದೆ. ಹಾಗಾಗಿ ತಿರುಪತಿಗೆ ಪೂರೈಕೆ ಮಾಡಲು ಆಗ್ತಿಲ್ಲ. ಮುಂದೆ ನೋಡೋಣ ಎಂದು ತಿಳಿಸಿದ್ದರು.

Join Whatsapp