ಪಾದಯಾತ್ರೆಗೆ ಮಠಾಧೀಶರ ಬೆಂಬಲ; ನಾಯಕರ ಜೊತೆ ಹೆಜ್ಜೆ ಹಾಕಿದ ಸ್ವಾಮೀಜಿಗಳು

Prasthutha|

ಬೆಂಗಳೂರು: ಬಿಡದಿಯಿಂದ ಕೆಂಗೇರಿಗೆ ಸೋಮವಾರ ಎರಡನೇ ದಿನದ ಮೇಕೆದಾಟು ಪಾದಯಾತ್ರೆ ಮುಂದುವರಿಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ದಾ. ಜಿ. ಪರಮೇಶ್ವರ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ,ಶಿವಕುಮಾರ್, ಡಾ. ಜಿ. ಪರಮೇಶ್ವರ, ಬಾಲಕೃಷ್ಣ, ವೆಂಕಟರಮಣಪ್ಪ, ಧ್ರುವನಾರಾಯಣ್ ಮತ್ತಿತರರು ಭಾಗವಹಿಸಿದ್ದರು.

- Advertisement -

ಅನೇಕ ಮಠದ ಶ್ರೀಗಳು ಬಿಡದಿಯಿಂದ ಕೆಂಗೇರಿವರೆಗೆ ಪಾದಯಾತ್ರೆ ನಿರತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಆಶೀರ್ವದಿಸಿದರಲ್ಲದೆ, ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿ ಜೊತೆಗೆ ತಾವೂ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಾಗೂ ಪಾದಯಾತ್ರೆಯಲ್ಲಿ ಭಾಗವಹಿಸಿದ ಸ್ವಾಮೀಜಿಗಳೂ ಜನರನ್ನುದ್ದೇಶಿಸಿ ಮಾತನಾಡಿದರು. ಬಿಸಿಲಿನ ಬೇಗೆಗೆ ಜನರು ಬೆವರು ಒರೆಸಿಕೊಳ್ಳುತ್ತಲೇ ಭಾಷಣ ಆಲಿಸಿದರು. ಇದನ್ನರಿತ ನಾಯಕರು ಚುಟುಕಾಗಿ ಭಾಷಣ ಮುಗಿಸಿ ನಡಿಗೆಗೆ ಅವಕಾಶ ಮಾಡಿಕೊಟ್ಟರು.

Join Whatsapp