ಅನರ್ಹ ಶಾಸಕರ ಮೇಲ್ಮನವಿ ಅರ್ಜಿಯನ್ನು ಪರಿಗಣಿಸಿದ ಸುಪ್ರೀಮ್ ಕೋರ್ಟ್

Prasthutha|

ನವದೆಹಲಿ: ಮಣಿಪುರ ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ಸಿನ ಮಾಜಿ ಶಾಸಕರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಮ್ ಕೋರ್ಟ್ ಬುಧವಾರ ಒಪ್ಪಿಗೆ ಸೂಚಿಸಿದೆ. ಶಾಸಕರ ಅನರ್ಹತೆಯನ್ನು ಅಸೆಂಬ್ಲಿ ಸ್ಪೀಕರ್ ಎತ್ತಿಹಿಡಿದಿದ್ದರು. ಮಾರ್ಚ್ 2017 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಚುನಾಯಿತರಾದ ಕ್ಷೇತ್ರಿಮಯಂ ಬಿರೇನ್ ಸಿಂಗ್, ಯೆಂಗ್ ಖೋಮ್ ಸುಚಂದ್ರ ಸಿಂಗ್ ಮತ್ತು ಸನಸಂ ಬೀರಾ ಸಿಂಗ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದರು.

- Advertisement -


ಈ ಹಿನ್ನೆಲೆಯಲ್ಲಿ ಜೂನ್ 18 ರಂದು ಅವರ ಶಾಸಕತ್ವವನ್ನು ಸ್ಪೀಕರ್ ಅನರ್ಹಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಮಣಿಪುರ ಹೈಕೋರ್ಟ್ ನಲ್ಲಿ ಈ ಮೂವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್ ಈ ವರ್ಷದ ಜೂನ್ 2 ರಂದು ತನ್ನ ನಿರ್ಧಾರವನ್ನು ಪ್ರಕಟಿಸಿ ಸ್ಪೀಕರ್ ತೀರ್ಮಾನವನ್ನು ಎತ್ತಿಹಿಡಿದಿತ್ತು. ಈ ಅದೇಶವನ್ನು ಪ್ರಶ್ನಿಸಿ ಈ ಮೂವರು ಸುಪ್ರೀಮ್ ಕೋರ್ಟ್ ನ ಮೆಟ್ಟಿಲೇರಿದ್ದಾರೆ.


ಎರಡು ವಾರಗಳಲ್ಲಿ ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಅಫಿದವಿತ್ ಸಲ್ಲಿಸುವಂತೆ ಸೂಚಿಸಿ ನ್ಯಾಯಮೂರ್ತಿಗಳಾದ ಯು.ಯು ಲಲಿತ್ ಮತ್ತು ಅಜಯ್ ರಸ್ತೋಗಿ ಅವರ ನೇತೃತ್ವದ ಪೀಠ, ಅಸೆಂಬ್ಲಿ ಸ್ಪೀಕರ್ ಕಚೇರಿಗೆ ನೋಟಿಸ್ ನೀಡಿದೆ. ಅರ್ಜಿದಾರರ ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಅನರ್ಹತೆ ಪ್ರಕ್ರಿಯೆಯಲ್ಲಿ ಕಾರ್ಯವಿಧಾನ ಮತ್ತು ದೋಷವಿದೆ ಎಂದು ವಾದಿಸಿದರು. ಈ ಹಿನ್ನೆಲೆಯಲ್ಲಿ ಈ ಅದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿದರು. ಈ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಮ್ ಕೋರ್ಟ್, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 29 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.



Join Whatsapp