ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 6 ಕ್ಕೆ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿಗಳಾದ ಎಸ್ . ರವೀಂದ್ರ ಭಟ್ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠವು ಸೋಮವಾರ ಈ ಆದೇಶ ನೀಡಿದೆ.
ಅಲ್ಲದೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ಅಸ್ಸಾಂ ಮತ್ತು ತ್ರಿಪುರಾ ರಾಜ್ಯಗಳಿಗೆ ಎರಡು ವಾರಗಳ ಕಾಲಾವಕಾಶ ನೀಡಿದೆ.
ಸಿಎಎಯನ್ನು ಪ್ರಶ್ನಿಸಿ 200 ಕ್ಕೂ ಹೆಚ್ಚು ಅರ್ಜಿಗಳನ್ನು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲಾಯಿತು. ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳಿಗೆ ನಿರ್ದಿಷ್ಟವಾದ ಸಮಸ್ಯೆಗಳನ್ನು ಸುಮಾರು 50 ಅರ್ಜಿಗಳು ಎತ್ತುತ್ತವೆ.