ತ್ರಿಪುರಾ ಹಿಂಸಾಚಾರ| ಸುಪ್ರೀಂ ಕೋರ್ಟ್ ವಕೀಲರು, ಮಾನವ ಹಕ್ಕುಗಳ ಸಂಘಟನೆಗಳಿಂದ ಸತ್ಯಶೋಧನೆ

Prasthutha|

ಅಗರ್ತಲಾ: ತ್ರಿಪುರಾದಲ್ಲಿ ಮುಸ್ಲಿಂ ವಿರೋಧಿ ಹಿಂಸಾಚಾರದ ಕುರಿತು ಸುಪ್ರೀಂ ಕೋರ್ಟ್ ವಕೀಲರು ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಜಂಟಿ ಸತ್ಯಶೋಧನೆ ಆರಂಭಿಸಿವೆ.

- Advertisement -

ವಿವರವಾದ ನೈಜ ವರದಿಯನ್ನು ಶೀಘ್ರದಲ್ಲಿಯೇ ರಾಷ್ಟ್ರಪತಿ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸಲಾಗುವುದು ಎಂದು ಜಂಟಿ ಸಮಿತಿಯ ವಕ್ತಾರರು ತಿಳಿಸಿದ್ದಾರೆ.

ಸರ್ಕಾರವು ಬಯಸಿದ್ದರೆ ಮುಸ್ಲಿಮರ ಮೇಲಿನ ಇಂತಹ ಭೀಕರ ದಾಳಿಗಳನ್ನು ತಡೆಯಬಹುದಿತ್ತು. ಸರ್ಕಾರದ ಸಂಪೂರ್ಣ ವೈಫಲ್ಯ ಇಲ್ಲಿ ಸ್ಪಷ್ಟವಾಗುತ್ತಿದೆ. ಸರ್ಕಾರ ಮತ್ತು ಬಿಜೆಪಿಯ ರಾಜಕೀಯ ಹಿತಾಸಕ್ತಿಗೆ ಅನುಗುಣವಾಗಿ ಆಕ್ರಮಣಕಾರರಿಗೆ ಸಹಾಯ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ವಕೀಲರು ಮತ್ತು ಮಾನವ ಹಕ್ಕುಗಳ ಸಂಘಟನೆಗಳ ಜಂಟಿ ತಂಡವು ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಧ್ಯಮಗಳಿಗೆ ಸತ್ಯವನ್ನು ಬಹಿರಂಗಪಡಿಸಿದೆ.

- Advertisement -

ತಂಡವು ದೌರ್ಜನ್ಯಕ್ಕೆ ಒಳಗಾದವರನ್ನು ಭೇಟಿಯಾಗಿ ಘಟನೆಗೆ ಸಂಬಂಧಿಸಿದ ಮಾಹಿತಿ ಮತ್ತು ಸತ್ಯಗಳನ್ನು ಸಂಗ್ರಹಿಸಿದೆ. ತಂಡವು ಶೀಘ್ರದಲ್ಲೇ ದೆಹಲಿಯಲ್ಲಿ ವಿವರವಾದ ವರದಿಯನ್ನು ಬಿಡುಗಡೆ ಮಾಡಿ ಅದನ್ನು ರಾಷ್ಟ್ರಪತಿ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಕೇಂದ್ರ ಗೃಹ ಕಾರ್ಯದರ್ಶಿ, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಕಳುಹಿಸಲಿದೆ.

Join Whatsapp