ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

- Advertisement -

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

- Advertisement -

ತುರ್ತಾಗಿ ಈ ವಿಷಯವನ್ನು ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಎ. ಎಮ್‌. ಸಿಂಘ್ವಿ ಅವರು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್‌ ಕುಮಾರ್ ಅವರಿದ್ದ ಪೀಠದ ಮುಂದೆ ಮನವಿ ಮಾಡಿದ್ದಾರೆ.

ಈ ಅರ್ಜಿಯೊಂದಿಗೆ ಇನ್ನೂ ಹಲವು ಅರ್ಜಿಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಕಪಿಲ್ ಸಿಬಲ್ ನ್ಯಾಯಾಲಯದ ಗಮನಕ್ಕೆ ತಂದರು. ಅದಕ್ಕೆ ಪ್ರತಿಯಾಗಿ, “ನಾನು ಮಧ್ಯಾಹ್ನ ಉಲ್ಲೇಖ ಪತ್ರವನ್ನು ಪರಿಶೀಲಿಸಿದ ನಂತರ, ನಿರ್ಧಾರ ಕೈಗೊಳ್ಳುತ್ತೇನೆ. ನಾವು ಈ ಅರ್ಜಿಯನ್ನು ಪಟ್ಟಿ ಮಾಡುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಭರವಸೆ ನೀಡಿದರು.

- Advertisement -

ಈ ಕಾಯ್ದೆಯು ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಪಿತೂರಿಯಾಗಿದೆ ಎಂದು ಆರೋಪಿಸಿರುವ ಅರ್ಜಿದಾರರು, ಕಾನೂನುಬಾಹಿರವಾಗಿ ತಿದ್ದುಪಡಿ ಮಾಡಲಾಗಿದ್ದು ಸಂವಿಧಾನದ 14, 15, 21, 25, 26, ಮತ್ತು 300-ಎ ವಿಧಿಗಳನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

- Advertisement -


Must Read

Related Articles