ಕೇಂದ್ರ ಸರ್ಕಾರದಿಂದ ನೋಟ್ ಬ್ಯಾನ್: ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: 2016ರ ನವೆಂಬರ್ 8ರಂದು ಕೇಂದ್ರ ಸರ್ಕಾರ ಏಕಾಏಕಿ ನೋಟ್ ಬ್ಯಾನ್ ಅನ್ನು ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 24ಕ್ಕೆ ಮುಂದೂಡಿದೆ.

- Advertisement -

2016ರಲ್ಲಿ 500 ಮತ್ತು 1000 ರೂಪಾಯಿಗಳ ನೋಟುಗಳನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್’ನ ಐವರು ನ್ಯಾಯಾಧೀಶರ ಪೀಠ ನವೆಂಬರ್ 24ಕ್ಕೆ ಮುಂದೂಡಿದೆ.

ಈ ವಿಚಾರವು ಶೈಕ್ಷಣಿಕವಾಗಿ ಮಾರ್ಪಟ್ಟಿದೆ ಮತ್ತು ಆರ್ಥಿಕ ನೀತಿಯ ವಿಷಯದಲ್ಲಿ ನ್ಯಾಯಾಂಗ ಪರಿಶೀಲನೆಯ ವ್ಯಾಪ್ತಿಯನ್ನು ನಿರ್ಬಂಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ವಾದಿಸಿದಾಗ, ಸುಪ್ರೀಂ ಕೋರ್ಟ್ ಪೀಠವು ವಿಚಾರಣೆಗೆ ಒಪ್ಪಿಗೆ ಸೂಚಿಸಿತ್ತು.

Join Whatsapp