ದ್ವೇಷ ಭಾಷಣ| ದೂರು ಬಾರದೇ ಇದ್ದರೂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ: ರಾಜ್ಯಗಳಿಗೆ ಸುಪ್ರೀಂ ಮಹತ್ವದ ಆದೇಶ

Prasthutha|

ಹೊಸದಿಲ್ಲಿ: ಯಾವುದೇ ದೂರು ಬಾರದೇ ಇದ್ದರೂ ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

- Advertisement -

ದ್ವೇಷ ಭಾಷಣವನ್ನು ಗಂಭೀರ ಅಪರಾಧ ಎಂದು ಬಣ್ಣಿಸಿದ ಸುಪ್ರೀಂಕೋರ್ಟ್, ಅದು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ. ಇದರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಲ್ಲಿ ವಿಳಂಬ ಮಾಡಿದರೆ ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ದೇಶಾದ್ಯಂತ ದ್ವೇಷದ ಅಪರಾಧಗಳ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.

- Advertisement -

ಅಕ್ಟೋಬರ್ 21, 2022ರಲ್ಲಿ ಸುಪ್ರೀಂ ಕೋರ್ಟ್ ದ್ವೇಷ ಭಾಷಣ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ಉತ್ತರಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಮಾತ್ರ ಆದೇಶ ನೀಡಿತ್ತು. ಆದರೆ ಇಂದು 2022ರ ಆದೇಶದ ವ್ಯಾಪ್ತಿಯನ್ನು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ವಿಸ್ತರಿಸಿದೆ.



Join Whatsapp