ಜುಲೈ 20ರಂದು ನೀಟ್-ಯುಜಿ ಪರೀಕ್ಷಾ ಫಲಿತಾಂಶ ಪ್ರಕಟಿಸಲು ಎನ್‌ಟಿಎಗೆ ಸುಪ್ರೀಂ ಕೋರ್ಟ್ ನಿರ್ದೇಶನ

Prasthutha|

ನವದೆಹಲಿ: ನೀಟ್-ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಜುಲೈ 20ರಂದು ಮಧ್ಯಾಹ್ನ 12 ಗಂಟೆಯೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಎನ್‌ಟಿಎಗೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿದೆ.

- Advertisement -

ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು. ನಗರವಾರು ಮತ್ತು ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಸಬೇಕು ಎಂದೂನ್ಯಾಯಾಲಯ ಆದೇಶಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅವ್ಯವಹಾರಗಳ ಕಾರಣ ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳು ಸಲ್ಲಿಕೆಯಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

- Advertisement -

ಎನ್‌ಟಿಎ ಎಲ್ಲಾ ಅಭ್ಯರ್ಥಿಗಳ ಫಲಿತಾಂಶವನ್ನು ಪ್ರಕಟಿಸದ ಕಾರಣ ಕೇಂದ್ರವಾರು ಅಂಕಗಳ ಮಾದರಿಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರು ದೂರಿದ್ದು, ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ನ್ಯಾಯಾಲಯ ಮುಂದೂಡಿದೆ.



Join Whatsapp