Home ಟಾಪ್ ಸುದ್ದಿಗಳು ಜುಲೈ 20ರಂದು ನೀಟ್-ಯುಜಿ ಪರೀಕ್ಷಾ ಫಲಿತಾಂಶ ಪ್ರಕಟಿಸಲು ಎನ್‌ಟಿಎಗೆ ಸುಪ್ರೀಂ ಕೋರ್ಟ್ ನಿರ್ದೇಶನ

ಜುಲೈ 20ರಂದು ನೀಟ್-ಯುಜಿ ಪರೀಕ್ಷಾ ಫಲಿತಾಂಶ ಪ್ರಕಟಿಸಲು ಎನ್‌ಟಿಎಗೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ನೀಟ್-ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಜುಲೈ 20ರಂದು ಮಧ್ಯಾಹ್ನ 12 ಗಂಟೆಯೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಎನ್‌ಟಿಎಗೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿದೆ.

ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು. ನಗರವಾರು ಮತ್ತು ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಸಬೇಕು ಎಂದೂನ್ಯಾಯಾಲಯ ಆದೇಶಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅವ್ಯವಹಾರಗಳ ಕಾರಣ ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳು ಸಲ್ಲಿಕೆಯಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

ಎನ್‌ಟಿಎ ಎಲ್ಲಾ ಅಭ್ಯರ್ಥಿಗಳ ಫಲಿತಾಂಶವನ್ನು ಪ್ರಕಟಿಸದ ಕಾರಣ ಕೇಂದ್ರವಾರು ಅಂಕಗಳ ಮಾದರಿಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರು ದೂರಿದ್ದು, ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ನ್ಯಾಯಾಲಯ ಮುಂದೂಡಿದೆ.

Join Whatsapp
Exit mobile version