ಭೀಮಾ ಕೋರೆಗಾಂವ್‌ ಪ್ರಕರಣ | ಗೌತಮ್ ನವಲಖಾ ಜಾಮೀನು ವಜಾಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ:  ಸಾಮಾಜಿಕ ಹೋರಾಟಗಾರ, ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿ ಗೌತಮ್‌ ನವಲಖಾ ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾಗೊಂಡಿದೆ.

- Advertisement -

ಬಾಂಬೆ ಹೈಕೋರ್ಟ್ ಫೆಬ್ರವರಿ 8 ರಂದು ನವಲಖಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಯು.ಯು. ಲಲಿತ್‌ ಮತ್ತು ಕೆ.ಎಂ.ಜೋಸೆಫ್‌ ಅವರನ್ನು ಒಳಗೊಂಡ ನ್ಯಾಯಪೀಠವು ನವಲಖಾ ಅವರ ಮನವಿಯನ್ನು ತಿರಸ್ಕರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಮಾರ್ಚ್‌ 26ರಂದು ತೀರ್ಪು ಕಾಯ್ದಿರಿಸಿತ್ತು.

- Advertisement -

ಎಲ್ಗಾರ್‌ ಪರಿಷದ್‌-ಮಾವೊ ನಡುವೆ ಸಂಪರ್ಕ ಇದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನವಲಖಾ ಅವರನ್ನು ಬಂಧಿಸಲಾಗಿತ್ತು. ಡಿಸೆಂಬರ್‌ 31, 2017ರಲ್ಲಿ ಪುಣೆಯಲ್ಲಿ ನಡೆದ ಎಲ್ಗಾರ್‌ ಪರಿಷದ್‌ ಸಭೆಯಲ್ಲಿ ಹೋರಾಟಗಾರರೊಬ್ಬರು ಮಾಡಿದ ಭಾಷಣವು ಭೀಮಾ ಕೋರೆಗಾಂವ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡಿತ್ತು. ಇದು ಮಾವೋವಾದಿಗಳ ಬೆಂಬಲಿತ ಸಭೆಯಾಗಿತ್ತು ಎಂಬುದಾಗಿ ಪ್ರಕರಣ ದಾಖಲಿಸಲಾಗಿತ್ತು.

.

Join Whatsapp