ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿ ಏಕಕಾಲಕ್ಕೆ ಎರಡು ವಿಧಾನಸಭಾ ಅಥವಾ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

- Advertisement -


ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅವರು ಈ ಅರ್ಜಿ ಸಲ್ಲಿಸಿದ್ದರು.


ವಿಭಿನ್ನ ಕ್ಷೇತ್ರಗಳಿಂದ ಸ್ಪರ್ಧೆ ಮಾಡದಂತೆ ವ್ಯಕ್ತಿಯೊಬ್ಬರನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ನೇತೃತೃದ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಿತು.

- Advertisement -


“ಈ ರೀತಿ ಸ್ಪರ್ಧೆ ಮಾಡುವ ಮೂಲಕ ರಾಜಕಾರಣಿಯೊಬ್ಬರು ರಾಷ್ಟ್ರಮಟ್ಟದ ನಾಯಕರಾಗಿ ರೂಪುಗೊಳ್ಳಲು ಪ್ರಯತ್ನಿಸಬಹುದು” ಎಂದು ಸಿಜೆಐ ಚಂದ್ರಚೂಡ್ ಹೇಳಿದರು.
“ವಿಧಾನಸಭಾ ಚುನಾವಣೆಯಲ್ಲಿ ಒಂದಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಅಭ್ಯರ್ಥಿಯಾಗಲು ಅನುಮತಿಸುವುದು ಶಾಸನಾತ್ಮಕ ನೀತಿಯ ಭಾಗವಾಗಿದ್ದು, ಅಂಥ ಆಯ್ಕೆ ನೀಡುವ ಮೂಲಕ ಸಂಸದೀಯ ಪ್ರಜಾಪ್ರಭುತ್ವವನ್ನು ವಿಸ್ತರಿಸಬೇಕೆನ್ನುವುದು ಸಂಸತ್’ನ ಇಚ್ಛೆಗೆ ಬಿಟ್ಟ ವಿಚಾರ” ಎಂದು ನ್ಯಾಯಾಲಯ ಹೇಳಿದೆ.

Join Whatsapp