ಮನೀಶ್ ಸಿಸೋಡಿಯಾ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Prasthutha|

ನವದೆಹಲಿ: ಸಿಬಿಐನಿಂದ ಬಂಧನಕ್ಕೊಳಗಾಗಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಮಾತ್ರವಲ್ಲ ಇಂತಹ ಅರ್ಜಿಗಳನ್ನು ಮೊದಲು ಹೈಕೋರ್ಟ್’ನಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಸಿಸೋಡಿಯಾ ಅವರ ಅರ್ಜಿ ವಿಚಾರಣೆ ನಡೆಸಿ, ದೆಹಲಿಯಲ್ಲಿ ನಡೆದ ಎಲ್ಲ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ಗೆ ನೇರವಾಗಿ ಬರುತ್ತೀರಿ. ಮೊದಲು ಹೈಕೋರ್ಟ್‌ಗೆ ಅರ್ಜಿ ಹಾಕಿ. ಅಲ್ಲಿ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಿ” ಎಂದು ಹೇಳಿತು.
ಅಬಕಾರಿ ಅಕ್ರಮ ಆರೋಪದಲ್ಲಿ ಬಂಧಿತರಾಗಿರುವ ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ ವಹಿಸಿದೆ.

Join Whatsapp