ತಾಜ್ ಮಹಲ್ ನ ನೈಜ ಇತಿಹಾಸ ಪತ್ತೆಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ತಾಜ್ ಮಹಲ್ ನ ನೈಜ ಇತಿಹಾಸವನ್ನು ಅಧ್ಯಯನ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಇದು ಪ್ರಚಾರಕ್ಕಾಗಿ ಸಲ್ಲಿಸಿದ್ದ ಅರ್ಜಿ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎಂ.ಎಂ.ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು “ಪ್ರಚಾರ ಹಿತಾಸಕ್ತಿ ಅರ್ಜಿ” ಎಂದು ಕರೆಯುವ ಮೂಲಕ ವಜಾಗೊಳಿಸಿತು. ಮಾರ್ಚ್ 2022 ರಲ್ಲಿ ಅರ್ಜಿದಾರರ ಮನವಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ನ ಆದೇಶದಲ್ಲಿ ಮಧ್ಯಪ್ರವೇಶಿಸಲು ನ್ಯಾಯಪೀಠವು ನಿರಾಕರಿಸಿತು.

ತಾಜ್ ಮಹಲ್ ನ ನೈಜ ಇತಿಹಾಸವನ್ನು ಪತ್ತೆಹಚ್ಚಲುಸತ್ಯ ಶೋಧನಾ ಸಮಿತಿಯನ್ನು ರಚಿಸಬೇಕು ಎಂದು ಅರ್ಜಿದಾರ ಡಾ.ರಜನೀಶ್ ಸಿಂಗ್ ಕೋರಿದ್ದರು. ಅಲ್ಲದೆ ಮೊಘಲ್ ಚಕ್ರವರ್ತಿ ಶಹಜಹಾನ್ ತಾಜ್ಮಹಲ್ ಅನ್ನು ನಿರ್ಮಿಸಿದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

Join Whatsapp