Home ಟಾಪ್ ಸುದ್ದಿಗಳು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್’ಗೆ ಸುಪ್ರೀಂ ಕೋರ್ಟ್ ಜಾಮೀನು

ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್’ಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.


ಅರ್ಜಿಯ ವಿಚಾರಣೆ ನಡೆಸಿದ ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ ಮತ್ತು ದೀಪಂಕರ್ ದತ್ತಾ ಅವರಿದ್ದ ತ್ರಿಸದಸ್ಯ ಪೀಠವು, ತೀಸ್ತಾ ಅವರಿಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ ಜಾಮೀನು ನೀಡಿದೆ.


ಜಾಮೀನು ಅವಧಿಯಲ್ಲಿ ತೀಸ್ತಾ ಅವರ ಪಾಸ್ ಪೋರ್ಟ್ ಅನ್ನು ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರದೇ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿದೆ. ಹಾಗೂ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ ಜಾಮೀನು ರದ್ದು ಮಾಡಲಾಗುವುದು ಎಂದು ಕೋರ್ಟ್ ಹೇಳಿದೆ.

Join Whatsapp
Exit mobile version