ಮುಹಮ್ಮದ್ ಝುಬೈರ್ ಗೆ ಮಧ್ಯಂತರ ಜಾಮೀನು: ಸಂಜೆ 6ಗಂಟೆಯೊಳಗೆ ಜೈಲಿನಿಂದ ಬಿಡುಗಡೆಗೆ ಸುಪ್ರೀಂ ಆದೇಶ

Prasthutha|

ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಎಫ್ ಐಆರ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

- Advertisement -

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ, ದೆಹಲಿ ನ್ಯಾಯಾಲಯವು ಜಾಮೀನು ನೀಡಿದಾಗ ಅವರನ್ನು ಮತ್ತೆ ಕಸ್ಟಡಿಯಲ್ಲಿ ಮುಂದುವರಿಸಲು ಯಾವುದೇ ಸಮರ್ಥನೆ ಇಲ್ಲ. ಅಂತ್ಯವಿಲ್ಲದ ಶಿಕ್ಷೆಗೆ ಗುರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿತು.

ಝುಬೈರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಎಲ್ಲ ಆರು ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಲಾಗಿದೆ.

Join Whatsapp