Home ಟಾಪ್ ಸುದ್ದಿಗಳು ಸುಪ್ರೀಂಕೋರ್ಟ್’ ನಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

ಸುಪ್ರೀಂಕೋರ್ಟ್’ ನಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

ನವದೆಹಲಿ: ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್ ಐಆರ್ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿದೆ. ಇದೇ ವೇಳೆ, ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.


ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ.


ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್ ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಕೆಲವು ದಿನಗಳ ಹಿಂದೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.

Join Whatsapp
Exit mobile version