ಹೊಸದಿಲ್ಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಮುಸ್ಲಿಮರಿಗೆ ವಝುಗೆ (ಅಂಗ ಶುದ್ಧಿ) ಅವಕಾಶ ನೀಡುವ ಕುರಿತು ಸಭೆ ನಡೆಸುವಂತೆ ಸ್ಥಳೀಯ ಜಿಲ್ಲಾಧಿಕಾರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.
ರಂಝಾನ್ ವೇಳೆ ಜ್ಞಾನವಾಪಿ ಆವರಣದಲ್ಲಿ ವಝುಗೆ ಅವಕಾಶ ನೀಡುವಂತೆ ಕೋರಿ ಅಂಜುಮಾನ್ ಇಂತಝಾಮಿಯಾ ಮಸ್ಜಿದ್ ಸಮಿತಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದು, ಇಂದು (ಮಂಗಳವಾರ) ಸಭೆ ನಡೆಯಲಿದೆ.
ಮಸೀದಿ ಆವರಣದಲ್ಲಿ ಹಿಂದೂ ಮತ್ತು ಮುಸ್ಲಿಮರಿಗೆ ಹೊಂದಿಕೆಯಾಗುವಂಥ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ ಸಭೆಯಲ್ಲಿ ತೆಗೆದುಕೊಳ್ಳಲಾಗುವ ನಿರ್ಧಾರವನ್ನು ಜಾರಿಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ಅವರು ನ್ಯಾಯಾಲಯಕ್ಕೆ ತಿಳಿಸಿದರು.