ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

Prasthutha|

ನವದೆಹಲಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

- Advertisement -

ಪ್ರಕರಣದಲ್ಲಿ 11 ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ  ಜೈಲಿನಿಂದ ಬಿಡುಗಡೆಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ , ಈ ವಿಷಯದಲ್ಲಿ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಗುರುವಾರ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದೆ.

ಎರಡು ವಾರಗಳ ನಂತರ ಅರ್ಜಿಯ ಮುಂದಿನ ವಿಚಾರಣೆ ನಡೆಸುವುದಾಗಿ ಎಂದು ನ್ಯಾಯಾಲಯ ತಿಳಿಸಿದೆ.

- Advertisement -

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವಾರು ಸಾಮಾಜಿಕ ಕಾರ್ಯಕರ್ತರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Join Whatsapp