Home ಟಾಪ್ ಸುದ್ದಿಗಳು ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಕರಣದಲ್ಲಿ 11 ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ  ಜೈಲಿನಿಂದ ಬಿಡುಗಡೆಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ , ಈ ವಿಷಯದಲ್ಲಿ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಗುರುವಾರ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದೆ.

ಎರಡು ವಾರಗಳ ನಂತರ ಅರ್ಜಿಯ ಮುಂದಿನ ವಿಚಾರಣೆ ನಡೆಸುವುದಾಗಿ ಎಂದು ನ್ಯಾಯಾಲಯ ತಿಳಿಸಿದೆ.

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವಾರು ಸಾಮಾಜಿಕ ಕಾರ್ಯಕರ್ತರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Join Whatsapp
Exit mobile version