ನವದೆಹಲಿ : ನ್ಯಾಯಾಲಯಗಳ ಬಗ್ಗೆ ಟೀಕೆಗಳು ಹೆಚ್ಚುತ್ತಿವೆ ಮತ್ತು ಈಗ ಎಲ್ಲರೂ ಅದನ್ನೇ ಮಾಡುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗದ ವಿರುದ್ಧ ಟ್ವೀಟ್ ಮಾಡಿದ್ದ ಕಾರ್ಟೂನಿಸ್ಟ್ ರಚಿತಾ ತನೇಜಾ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ವೇಳೆ ಕೊರ್ಟ್ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಾಲಯಗಳ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಬಗ್ಗೆ ಕೋರ್ಟ್ ಬೇಸರ ವ್ಯಕ್ತಪಡಿಸಿದೆ.
ರಚಿತಾ ತನೇಜಾ ಮತ್ತು ಹಾಸ್ಯ ಕಲಾವಿದ ಕುನಾಲ್ ಕಮ್ರಾ ವಿರುದ್ಧ ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ಎರಡು ವಾರಗಳ ವರೆಗೆ ಮುಂದೂಡಿದೆ.