Home ಟಾಪ್ ಸುದ್ದಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ಸಿಜೆ ಪಿ.ಪಿ. ವರಲೆ ನೇಮಕ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ಸಿಜೆ ಪಿ.ಪಿ. ವರಲೆ ನೇಮಕ

ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಕಳೆದ ವಾರ ಅವರ ಪದೋನ್ನತಿಗೆ ಶಿಫಾರಸು ಮಾಡಿತ್ತು. ಹೈಕೋರ್ಟ್ ನ್ಯಾಯಾಧೀಶರಲ್ಲಿ ಹಿರಿಯರಾದ ನ್ಯಾಯಮೂರ್ತಿ ವರಲೆ ಪರಿಶಿಷ್ಟ ಜಾತಿಗೆ ಸೇರಿದವರು. ಅಷ್ಟೇ ಅಲ್ಲದೆ, ದೇಶಾದ್ಯಂತ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಮುಖ್ಯ ನ್ಯಾಯಮೂರ್ತಿಯೂ ಆಗಿದ್ದಾರೆ. ಈ ಅಂಶವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ತನ್ನ ಹೇಳಿಕೆಯಲ್ಲಿ ಪರಿಗಣಿಸಿತ್ತು.

ಪ್ರಸನ್ನ ಬಿ ವರಲೆ ಹೈಕೋರ್ಟ್ ನ್ಯಾಯಾಧೀಶರ ಅಖಿಲ ಭಾರತ ಜ್ಯೇಷ್ಠತೆಯಲ್ಲಿ ಎಸ್‌ಎಲ್ ಸಂಖ್ಯೆ 6 ರಲ್ಲಿ ನಿಂತಿದ್ದಾರೆ. ಬಾಂಬೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ಹಿರಿತನದಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ.

Join Whatsapp
Exit mobile version