ಮೀಡಿಯಾ ಒನ್ ಮೇಲಿನ ನಿಷೇಧ ರದ್ದುಪಡಿಸಿದ ಸುಪ್ರೀಂಕೋರ್ಟ್

Prasthutha|

ನವದೆಹಲಿ: ಮಲಯಾಳಂ ಸುದ್ದಿ ವಾಹಿನಿ ಮೀಡಿಯಾ ಒನ್ ಮೇಲೆ ಕೇಂದ್ರ ಸರ್ಕಾರ ಹೇರಿರುವ ಪ್ರಸಾರ ನಿಷೇಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.

- Advertisement -


ಗೃಹ ಸಚಿವಾಲಯ ಭದ್ರತಾ ಕಾರಣ ನೀಡಿ ಚಾನೆಲ್’ನ ಪ್ರಸಾರ ಪರವಾನಗಿಯನ್ನು ನವೀಕರಿಸದಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ಧಾರವನ್ನು ಎತ್ತಿಹಿಡಿದ ಕೇರಳ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಚಾನೆಲ್ ಅನ್ನು ನಡೆಸುತ್ತಿರುವ ಕಂಪನಿ ಸಲ್ಲಿಸಿದ ವಿಶೇಷ ರಜೆ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.

ನಾಗರಿಕರ ಹಕ್ಕುಗಳನ್ನು ನಿರಾಕರಿಸಲು ಸರ್ಕಾರ ರಾಷ್ಟ್ರೀಯ ಭದ್ರತೆಯ ವಿಷಯವನ್ನು ಬಳಸುತ್ತಿದೆ. ಇದು ಕಾನೂನಿನ ನಿಯಮಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದರು.

- Advertisement -

ನಾಗರಿಕರ ಹಕ್ಕುಗಳನ್ನು ನಿರಾಕರಿಸಲು ‘ರಾಷ್ಟ್ರೀಯ ಭದ್ರತೆ’ಯ ಕಾರಣ ನೀಡಿ ನಾಗರಿಕರ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

ಚಾನೆಲ್ ನಡೆಸುತ್ತಿರುವ ಮಾಧ್ಯಮಮ್ ಬ್ರಾಡ್‌ಕಾಸ್ಟಿಂಗ್ ಲಿಮಿಟೆಡ್ (ಎಂಬಿಎಲ್) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠ ಈ ಮಹತ್ವದ ತೀರ್ಪು ನೀಡಿದೆ.



Join Whatsapp