ನವದೆಹಲಿ: ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವ ಸರ್ಕಾರದ ಆದೇಶವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್’ನ ವಿಧಿಯನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್’ಗೆ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಮುಕ್ತಾಯಗೊಂಡಿದ್ದು, ಈ ವಾರ ಸುಪ್ರೀಮ್ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ.
ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರನ್ನೊಳಗೊಂಡ ಪೀಠ ಸತತ 10 ದಿನಗಳ ಕಾಲ ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದು, ಸೆಪ್ಟೆಂಬರ್ 22ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಈ ಮಧ್ಯೆ ನ್ಯಾಯಮೂರ್ತಿ ಗುಪ್ತಾ ಅವರು ಅಕ್ಟೋಬರ್ 16ಕ್ಕೆ ನಿವೃತ್ತರಾಗಲಿದ್ದು, ಈ ನಿಟ್ಟಿನಲ್ಲಿ ಇದೇ ವಾರ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.