ನವದೆಹಲಿ: ವೈವಾಹಿಕ ಅತ್ಯಾಚಾರ ಪ್ರಕರಣವನ್ನು ಅಪರಾಧೀಕರಿಸುವ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಮ್ ಕೋರ್ಟ್’ಗೆ ಸಲ್ಲಿಸಲಾದ ಅರ್ಜಿಗಳ ಕುರಿತು ಅದು ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ವಿಷಯಕ್ಕೆ ಸಂಬಂಧಿಸಿದ ಮನವಿಗಳನ್ನು ಪರಿಶೀಲನೆ ನಡೆಸಲು ಸುಪ್ರೀಮ್ ಕೋರ್ಟ್ ಸಮ್ಮತಿಸಿದೆ.
ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 2023ರಲ್ಲಿ ನಡೆಸುವುದಾಗಿ ಸುಪ್ರೀಮ್ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.