ಸ್ಥಳೀಯ ವಿಳಾಸ ಇಲ್ಲದಿದ್ದರೂ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ : ಸುಪ್ರೀಂ ಕೋರ್ಟ್

Prasthutha|

ಹೊಸದಿಲ್ಲಿ : ದೇಶದಲ್ಲಿ ಕೋವಿಡ್ ಸೋಂಕು ಗಂಭೀರಾವಸ್ಥೆಗೆ ತಲುಪಿದ್ದು, ದಿನದಿಂದ ದಿನಕ್ಕೆ ತೀವ್ರ ಹೆಚ್ಚಳವಾಗುತ್ತಿರುವ ಸೋಂಕಿನಿಂದ ದೇಶವೇ ಕಂಗಾಲಾಗಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಆಮ್ಲಜನಕದ ಕೊರತೆ ದೊಡ್ಡ ಪ್ರಮಾಣದಲ್ಲಿ ಕಂಡು ಬರುತ್ತಿವೆ. ಈ ನಡುವೆ ಸುಪ್ರೀಂ ಕೋರ್ಟ್ ಸೋಂಕಿನ ಗಂಭೀರಾವಸ್ಥೆಯನ್ನು ಆದೇಶ ನೀಡಿದ್ದು, ರೋಗಿಯು ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ವಿಳಾಸ ಪ್ರಮಾಣಪತ್ರ ಅಥವಾ ಐಡಿ ಪುರಾವೆಯನ್ನು ಹೊಂದಿಲ್ಲದಿದ್ದರೂ, ಅವರನ್ನು ಆಸ್ಪತ್ರೆಗೆ ದಾಖಲಿಸುವುದು ಮತ್ತು ಅಗತ್ಯ ಔಷಧಿಗಳನ್ನು ನೀಡುವುದನ್ನು ನಿರಾಕರಿಸುವಂತಿಲ್ಲ ಎಂದು ಹೇಳಿದೆ.

- Advertisement -

ದೇಶದಲ್ಲಿ ಆಮ್ಲಜನಕ ಬಿಕ್ಕಟ್ಟು ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಆಸ್ಪತ್ರೆಗೆ ದಾಖಲಾಗುವ ಬಗ್ಗೆ ಎರಡು ವಾರಗಳಲ್ಲಿ ರಾಷ್ಟ್ರೀಯ ನೀತಿಯನ್ನು ಹೊರತರಲು ಕೇಂದ್ರ ಸರ್ಕಾರವನ್ನು ಕೇಳಿದೆ. ಈ ನೀತಿಯನ್ನು ಎಲ್ಲಾ ರಾಜ್ಯ ಸರ್ಕಾರಗಳು ಒಪ್ಪಿಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಈ ನೀತಿಯನ್ನು ರೂಪಿಸಿದರೆ, ಸ್ಥಳೀಯ ವಿಳಾಸ ಪುರಾವೆ ಅಥವಾ ಐಡಿ ಪುರಾವೆ ಇಲ್ಲದ ಯಾವುದೇ ರೋಗಿಯನ್ನು ಆಸ್ಪತ್ರೆಗೆ ದಾಖಲಿಸುವುದನ್ನು ತಡೆಯಲು ಸಾಧ್ಯವಿಲ್ಲ.

Join Whatsapp