ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶ

Prasthutha|

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರು ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ಪೀಠವು ಮೇ 17 ರಂದು ನೀಡಿದ ನಿರ್ದೇಶನದ ಮೇರೆಗೆ ಈ ಆದೇಶವನ್ನು ಹೊರಡಿಸಿದೆ.

ನಳಿನಿ ಶ್ರೀಹರ್, ಜಯಕುಮಾರ್, ಆರ್ ಪಿ ರವಿಚಂದ್ರನ್, ರಾಬರ್ಟ್ ಪಿಯಾಸ್, ಸುತೇಂದ್ರರಾಜ ಮತ್ತು ಶ್ರೀಹರನ್  ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.

- Advertisement -

ನಳಿನಿ ಸೇರಿದಂತೆ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, 23 ವರ್ಷದಿಂದ ಜೈಲಿನಲ್ಲಿದ್ದರು. ಅವರು, ಅವಧಿಪೂರ್ವ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.



Join Whatsapp